ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಧಾರ್ಮಿಕ ಸಂಸ್ಕಾರದ ಶಿಕ್ಷಣ ಶಿಬಿರ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಧಾರ್ಮಿಕ ಸಂಸ್ಕಾರದ ಶಿಕ್ಷಣ ಶಿಬಿರ

 

ಎಳವೆಯಲ್ಲಿಯೇ ಮಕ್ಕಳಿಗೆ ಧಾರ್ಮಿಕ ಸಂಸ್ಕಾರದ ಶಿಕ್ಷಣ ದೊರೆತರೆ ಮುಂದಿನ ಸಾಮಾಜಿಕ ಜೀವನದಲ್ಲಿ ಉತ್ತಮ ಜವಾಬ್ದಾರಿ ಯುತ ನಾಗರಿಕರಾಗಿ ಬೆಳೆದು ಶಿಬಿರಗಳಿಂದ ಮಕ್ಕಳ ವ್ಯಕ್ತಿತ್ವ ವಿಕಾಸನ ಬೆಳೆಯಲು ಸಹಕಾರಿ ಯಾಗುತ್ತದೆ. ಅದಕ್ಕಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ತಿಂಗಳ ಕಾಲ ವಿಷ್ಣು ಸಹಸ್ರನಾಮ ಸ್ತೋತ್ರ ಹಾಗೂ ಹನುಮಾನ್ ಚ್ಚಾಲಿಸಾ ಮಂತ್ರ ಪಠಣ ತರಬೇತಿ ಶಿಬಿರವು ನಡೆಯುತ್ತಿದೆ.ಈಗಾಗಲೇ ಹಲವಾರು ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಂಡು ಈ ಉಚಿತ ಶಿಬಿರದ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಪ್ರಯೋಜನವನ್ನು ಮಕ್ಕಳು ಪಡೆಯುವಂತಾಗಲೂ ಹೆತ್ತವರು ಮಕ್ಕಳನ್ನು ಪ್ರೋತ್ಸಾಹಿಸಬೇಕಾಗಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಹಾಗೂ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಉರ್ಮಿಳಾ ರಮೇಶ್ ಕುಮಾರ್ ಇವರು ಈ ಮೂಲಕ ತಿಳಿಸಿರುವರು.