ಮಂಗಳೂರು : ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಕುದ್ರೋಳಿಯಲ್ಲಿ ಹಲವಾರು ಕ್ರಾಂತಿಕಾರಿ ಹೆಜ್ಜೆಗಳನ್ನು ಇರಿಸಿ ಮಹಿಳೆಯರಿಗೆ ಧಾರ್ಮಿಕ ವಿಧಿ ವಿಧಾನಗಳಲ್ಲಿ ಅವಕಾಶ ಕಲ್ಪಿಸಿದ್ದು, ಕ್ಷೇತ್ರವು ದೇಶ-ವಿದೇಶಗಳಲ್ಲೂ ಪ್ರಸಿದ್ದಿ ಪಡೆದಿದೆ. ಕೊರೊನಾ ಸಂದರ್ಭ ನಾನು ಸಲ್ಲಿಸಿದ ಸೇವೆಯನ್ನು ಗುರುತಿಸಿ ದಸರಾ ಉದ್ಘಾಟನೆಯ ಅವಕಾಶ ಸಿಕ್ಕಿದ್ದು ನಿಜಕ್ಕೂ ತುಂಬಾ ಖುಷಿ ತಂದಿದೆ. ಕೊರೋನಾ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೊರೊನಾ ವಾರಿಯರ್ ಗಳಿಗೆ ಗಳಿಗೆ ಹೆಚ್ಚು ನೆರವಾಗಿದ್ದೆ, ಅವರ ಪ್ರಾರ್ಥನಾ ಫಲದಿಂದ ಈ ಅವಕಾಶ ಲಭಿಸಿದೆ ಎಂದು ಹೇಳಿದರು.
