ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಮಂಗಳೂರು ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಭೇಟಿ ನೀಡಿ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಮಂಗಳೂರು ಮೇಯರ್ ದಿವಾಕರ್, ದೇವಳ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಟ್ರಸ್ಟಿಗಳಾದ ಪದ್ಮರಾಜ್, ಶೇಖರ್ ಪೂಜಾರಿ, ರವಿಶಂಕರ್ ಮಿಜಾರ್, ಅಭಿವೃದ್ಧಿ ಸಮಿತಿಯ ಹರಿಕೃಷ್ಣ ಬಂಟ್ವಾಳ್, ರಾಧಕೃಷ್ಣ, ಕಾರ್ಪೊರೇಟರ್ ಪ್ರೇಮಾನಂದ್ ಶೆಟ್ಟಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.